ಬೆಂಗಳೂರು, ನ.08 (DaijiworldNews/HR): ಬಿಟ್ ಕಾಯಿನ್ ದಂಧೆ ಪ್ರಕರಣದ ಆರೋಪಿ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ ಮೆಟ್ರೋಪಾಲಿಟನ್ ಸಂಚಾರಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಹೋಟೆಲ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾಕರ್ ಶ್ರೀಕೃಷ್ಣ ಹಾಗೂ ಆತನ ಸ್ನೇಹಿತನನ್ನು ನ.6ರಂದು ಜೀವನ್ ಭೀಮಾನಗರ ಠಾಣೆ ಪೊಲಿಸರು ಬಂಧಿಸಿದ್ದರು.
ಇನ್ನು ಇಂದು ಶ್ರೀಕೃಷ್ಣನನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ಸಂಚಾರಿ ನ್ಯಾಯಾಲಯ-1 ನವೆಂಬರ್ 22ರವರೆಗೆ ಆರೋಪಿ ಶ್ರೀಕೃಷ್ಣನನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದೆ.
ಬಿಟ್ ಕಾಯಿನ್ ಪ್ರಕರಣ ಹಾಗೂ ಹ್ಯಾಕಿಂಗ್ ಪ್ರಕರಣದಲ್ಲಿ ಈ ಹಿಂದೆ ಬಂಧನಕ್ಕೀಡಾಗಿದ್ದ ಆರೋಪಿ ಶ್ರೀಕೃಷ್ಣ ಎರಡು ತಿಂಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.