ಚೆನ್ನೈ, ನ.09 (DaijiworldNews/HR): ಈಗಾಗಲೇ ಚೆನ್ನೈ ಮತ್ತು ತಮಿಳುನಾಡಿನಲ್ಲಿ ಮಳೆಯ ಅಬ್ಬರಕ್ಕೆ ನಾಲ್ವರು ಸಾವನ್ನಪ್ಪಿದ್ದು, ಇದೀಗ ಮತ್ತೆ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಚೆನ್ನೈನ ತಗ್ಗು ಪ್ರದೇಶಗಳು ಕಳೆದೆರಡು ದಿನಗಳಿಂದ ಜಲಾವೃತವಾಗಿದ್ದು, ಮಳೆಯಿಂದಾಗಿ ತಮಿಳುನಾಡಿನಲ್ಲಿ ಈಗಾಗಲೇ ನಾಲ್ವರು ಸಾವನ್ನಪ್ಪಿದ್ದಾರೆ.
ಇನ್ನು ನೀಲಗಿರಿ, ಕೊಯಮತ್ತೂರು, ದಿಂಡಿಗಲ್, ಥೇಣಿ, ತೆಂಕಶಿ ಮತ್ತು ತಿರುನಲ್ವೇಲಿ ಸೇರಿದಂತೆ ಸುಮಾರು 14 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಈಗಾಗಲೇ ಈ ಪ್ರದೇಶದ 60 ಮನೆಗಳು ನಾಶವಾಗಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದ ಕೆಲವು ಭಾಗಗಳಲ್ಲಿ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.