ಭೋಪಾಲ್, ನ.09 (DaijiworldNews/HR): ಕಮಲ ನೆಹರೂ ಮಕ್ಕಳ ಆಸ್ಪತ್ರೆಯ ನವಜಾತ ಶಿಶುಗಳ ಆರೈಕೆ ಘಟಕ (ಎಸ್ಎನ್ಸಿಯು)ದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಢದಲ್ಲಿ ನಾಲ್ಕು ಶಿಶುಗಳು ಜೀವಂತ ದಹನವಾಗಿರುವ ಘಟನೆ ನಡೆದಿದೆ.
ಈ ಘಟನೆ ಬಗ್ಗೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿದ್ದು, ಅಗ್ನಿ ಅವಘಢದಲ್ಲಿ ನಾಲ್ಕು ಮಕ್ಕಳು ಮೃತಪಟ್ಟಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ" ಎಂದಿದ್ದಾರೆ.
ಇನ್ನು ಆಸ್ಪತ್ರೆಯ ವಾರ್ಡ್ನಲ್ಲಿ 40 ಮಕ್ಕಳಿದ್ದು, ಈ ಪೈಕಿ 36 ಮಕ್ಕಳು ಸುರಕ್ಷಿತವಾಗಿವೆ. ಮೃತಪಟ್ಟ ಮಕ್ಕಳ ಪೋಷಕರಿಗೆ ತಲಾ ನಾಲ್ಕು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದಾರೆ.
ಘಟನೆ ನಡೆದ ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದ್ದು, ಇಡೀ ಕಟ್ಟಡದಲ್ಲಿ ಹೊಗೆ ಆವರಿಸಿದ್ದು, ಮಕ್ಕಳ ಸಂಬಂಧಿಕರು ಹಾಗೂ ಇತರರು ಮಕ್ಕಳನ್ನು ರಕ್ಷಿಸುವ ಪ್ರಯತ್ನದಲ್ಲಿದ್ದು, ಕೊನೆಗೆ 25 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಮಕ್ಕಳನ್ನು ಬೇರೆ ವಾರ್ಡ್ಗೆ ಸ್ಥಳಾಂತರಿಸಲಾಯಿತು ಎಂದು ಎಸ್ಪಿ ವಿಜಯ್ ಖತ್ರಿ ಹೇಳಿದ್ದಾರೆ.