ಬೆಂಗಳೂರು, ನ.09 (DaijiworldNews/HR): ಜೆಡಿಎಸ್ ಮುಖಂಡ ಬಿ. ದೇವೇಂದ್ರಪ್ಪ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಈ ವೇಳೆ ಜೆಡಿಎಸ್ ಜಗಳೂರು ತಾಲೂಕು ಘಟಕದ ಅಧ್ಯಕ್ಷ ಕೆ. ಗುರುಸಿದ್ದಪ್ಪ, ಯುವ ಘಟಕದ ಅಧ್ಯಕ್ಷ ಕೃಷ್ಣ ಯಾದವ್, ಜಗಳೂರು ಬಿಜೆಪಿ ಅಧ್ಯಕ್ಷ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ರಾಜಣ್ಣ ಮತ್ತಿತರರು ಕಾಂಗ್ರೆಸ್ ಸೇರಿದರು.
ಕಾರ್ಯಾಧ್ಯಕ್ಷ ಸಲೀಂ ಅಹಮದ್, 2018 ರ ಚುನಾವಣೆಯಲ್ಲಿ ಜಗಳೂರಿನ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಚ್.ಪಿ. ರಾಜೇಶ್ ಉಪಸ್ಥಿತರಿದ್ದರು.
ಜಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ದೇವೇಂದ್ರಪ್ಪ ಅವರು ಪರಾಜಿತರಾಗಿದ್ದರು.