ಬೆಂಗಳೂರು, ನ.10 (DaijiworldNews/PY): "ರಾಜಕೀಯ ಪ್ರೇರಿತ ಅಪಪ್ರಚಾರಕ್ಕೆ ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
17ನೇ ಶತಮಾನದ ಮೈಸೂರು ಸಂಸ್ಥಾನದ ಮುಸ್ಲಿಂ ದೊರೆ ಟಿಪ್ಪು ಸುಲ್ತಾನ್ ಜಯಂತಿಯ ಹಿನ್ನೆಲೆ ಟ್ವೀಟ್ ಮಾಡಿರುವ ಅವರು, "ಅಪ್ರತಿಮ ಸ್ವಾತಂತ್ರ್ಯ ಸೇನಾನಿ, ದಕ್ಷ ಆಡಳಿತಗಾರ ಮತ್ತು ಜಾತ್ಯತೀತನಾಗಿ ಸರ್ವರನ್ನೂ ಪೊರೆದ ಟಿಪ್ಪು ಸುಲ್ತಾನ್ ನಾಡಿನ ಹೆಮ್ಮೆ" ಎಂದಿದ್ದಾರೆ.
"ರಾಜಕೀಯ ಪ್ರೇರಿತ ಅಪಪ್ರಚಾರಕ್ಕೆ ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ. ನಾಡ ಬಂಧುಗಳಿಗೆ ಟಿಪ್ಪು ಜಯಂತಿಯ ಶುಭಾಶಯಗಳು" ಎಂದು ತಿಳಿಸಿದ್ದಾರೆ.
"ಬ್ರಿಟಿಷರ ವಹಾಸತುಶಾಹಿ ವ್ಯವಸ್ಥೆಗೆ ಸಿಂಹಸ್ವಪ್ನವಾಗಿ ಕಾಡಿದ ನಾಡಿನ ಹೆಮ್ಮೆಯ ಸೇನಾನಿ ಟಿಪ್ಪು ಸುಲ್ತಾನನ್ನು ಸ್ಮರಿಸೋಣ" ಎಂದಿದ್ದಾರೆ.