ನವದೆಹಲಿ, ನ.10 (DaijiworldNews/PY): ಕ್ರಿಕೆಟಿಗ ವಿರಾಟ್ ಕೊಹ್ಲಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಹೈದರಾಬಾದ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ರಾಮನಾಗೇಶ್ ಅಲಿಬತಿನಿ (23) ಎಂದು ಗುರುತಿಸಲಾಗಿದೆ. ಮುಂಬೈ ಪೊಲೀಸ್ ಇಲಾಖೆಯ ಸೈಬರ್ ಸೆಲ್ ವಿಭಾಗದಿಂದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ಅವರ ಮಗಳಿಗೆ ಆನ್ಲೈನ್ನಲ್ಲಿ ಅತ್ಯಾಚಾರ ಬೆದರಿಕೆ ಹಾಕಲಾಗಿತ್ತು. ಈ ಕುರಿತು ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿತ್ತು.
ಕಿಡಿಗೇಡಿಗಳ ಈ ರೀತಿಯಾದ ಬೆದರಿಕೆಯ ವಿರುದ್ದ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.