ಬೆಂಗಳೂರು, ನ.11 (DaijiworldNews/PY): ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಇಂದು ನಟ ಪುನೀತ್ ರಾಜ್ಕುಮಾರ್ ಅವರ ಮನೆಗೆ ಭೇಟಿ ನೀಡಿದ್ದು, ಸಾಂತ್ವಾನ ಹೇಳಿದ್ದಾರೆ.
ಈ ಸಂದರ್ಭ ಡಾ. ಶಿವಮೂರ್ತಿ ಮುರುಘಾ ಶರಣರು ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ, ಶಿವರಾಜ್ ಕುಮಾರ್ ಹಾಗೂ ಕುಟುಂಬಸ್ಥರಿಗೆ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪ್ರಕಟಿಸಲಾಗಿರುವ 2021 ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಅಧಿಕೃತ ಆಹ್ವಾನ ನೀಡಿದ್ದಾರೆ.
ಬಸವಶ್ರೀ ಪ್ರಶಸ್ತಿ ಕಾರ್ಯಕ್ರಮ 2022ನೇ ಮೇ ತಿಂಗಳಿನಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸುವಂತೆ ಆಹ್ವಾನಿಸಲಾಗಿದೆ.
ಪುನೀತ್ ರಾಜ್ಕುಮಾರ್ ಕುಟುಂಬವು ಶ್ರೀಮಠದ ಆಹ್ವಾನಕ್ಕೆ ಸಹಮತ ವ್ಯಕ್ತಪಡಿಸಿದೆ.