ಚೆನ್ನೈ, ನ.11 (DaijiworldNews/HR): ಸ್ಮಶಾನದಲ್ಲಿ ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ಮಳೆಯ ನಡುವೆ ರಕ್ಷಿಸುವ ಮೂಲಕ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ.
ತಮಿಳುನಾಡು ರಾಜಧಾನಿ ಚೆನ್ನೈನ ಟಿಪಿ ಛತ್ರಂ ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸ್ಮಶಾನದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿಯನ್ನು ಮಹಿಳಾ ಪೊಲೀಸ್ ಅಧಿಕಾರಿ ತಮ್ಮ ಹೆಗಲ ಮೇಲೆ ಹೊತ್ತು ನಿಂತಿರುವುದು ವಿಡಿಯೋದಲ್ಲಿದ್ದು, ಆಟೋ ಮುಖಾಂತರ ಸರಿಯಾದ ಸಮಯಕ್ಕೆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿ ಮಾನವೀಯತೆ ಮರೆದಿದ್ದಾರೆ.
ಇನ್ನು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದು ಇನ್ಸ್ಪೆಕ್ಟರ್ ರಾಜೇಶ್ವರಿ ಅವರ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಗುರುವಾರ ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ನಡುವೆ ಸ್ಮಶಾನದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ಪ್ರಜ್ಞೆ ತಪ್ಪಿ ಬಿದ್ದಿದ್ದ. ಇದೇ ಸಮಯದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇನ್ಸ್ಪೆಕ್ಟರ್ ರಾಜೇಶ್ವರಿ ಅವರಿಗೆ ಈ ವಿಚಾರ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿ ಆತನನ್ನು ರಕ್ಷಣೆ ಮಾಡಿದ್ದಾರೆ.