ಶಿವಮೊಗ್ಗ, ನ.11 (DaijiworldNews/PY): ಟಿ.ವಿ ತೋರಿಸುತ್ತೇನೆ ಎಂದು ಪುಸಲಾಯಿಸಿ 3 ವರ್ಷದ ಬಾಲಕಿಯನ್ನು ಕರೆದೊಯ್ದು ಕಾಮುಕನೋರ್ವ ಅತ್ಯಾಚಾರ ಎಸಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನೆರಮನೆಯ ಯುವಕನೋರ್ವ 3 ವರ್ಷದ ಬಾಲಕಿಯನ್ನು ಟಿ.ವಿ ತೋರಿಸುತ್ತೇನೆ ಎಂದು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಬಳಿಕ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ತಿಳಿದುಬಂದಿದೆ.
ಮಗುವಿನ ಗುಪ್ತಾಂಗದಲ್ಲಿ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿದ ಪೋಷಕರು ತಾಲೂಕು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಿದಾಗ ಅತ್ಯಾಚಾರ ಎಸಗಿರುವುದು ತಿಳಿದುಬಂದಿದೆ.
ಘಟನೆಯ ಬಗ್ಗೆ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.