ಬೆಂಗಳೂರು,ನ.11 (DaijiworldNews/HR): ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬದಲಾವಣೆ ವಿಚಾರ ಕುರಿತು ಇದೀಗ ಹೊಸ ಬಾಂಬ್ ಸಿಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಾನು ಸೇರಿದಂತೆ ರಾಜ್ಯದಲ್ಲಿ ನಾಲ್ವರು ಸಿಎಂ ಆಗಬಹುದು ಎಂದು ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, "ಜನರಿಗೆ ರಾಜಕಾರಣಿಗಳ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದ್ದು, ಜಾಗತಿಕ ಮಟ್ಟದಲ್ಲೂ ಭಾರತದ ಮೇಲೆ ಕೂಡ ವಿಶ್ವಾಸ ಕಡಿಮೆಯಾಗಿದೆ" ಎಂದರು.
ಇನ್ನು ಸಿಎಂ ಬದಲಾವಣೆ ವಿಚಾರದ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, "ಮೂವರು ಸಿಎಂ ಆಗಬಹುದು ಎಂಬ ಮಾತು ಕೇಳಿಬರುತ್ತಿದೆ. ರಾಜ್ಯದಲ್ಲಿ ಮೂವರಲ್ಲ, ನನ್ನನ್ನೂ ಸೇರಿಸಿ ನಾಲ್ವರು ಮುಖ್ಯಮಂತ್ರಿಗಳು ಆಗಬಹುದು" ಎಂದು ಹೇಳಿದ್ದಾರೆ.