ನವದೆಹಲಿ, ನ. 12 (DaijiworlNews/HR): ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 12,516 ಪ್ರಕರಣಗಳು ಪತ್ತೆಯಾಗಿದ್ದು, 501 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ 501 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 462690 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,37,416 ಸಕ್ರಿಯ ಪ್ರಕರಣಗಳಿದ್ದು, ಈ ಮೂಲಕ ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 267 ದಿನಗಳಲ್ಲಿ ಕಡಿಮೆ ಇದೆ.