ಬೆಂಗಳೂರು, ನ. 12 (DaijiworlNews/HR): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ಬಸ್ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಮೊಬೈಲ್ ಫೋನ್ ಸ್ಪೀಕರ್ಗಳಲ್ಲಿ ಜೋರಾಗಿ ಹಾಡುಗಳನ್ನು ಪ್ಲೇ ಮಾಡುವುದನ್ನು ನಿಷೇಧಿಸಲಾಗಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ಸಲ್ಲಿಸಲಾದ ರಿಟ್ ಅರ್ಜಿಯ ಹಿನ್ನೆಲೆಯಲ್ಲಿ ಬಂದಿರುವ ಆದೇಶದ ಪ್ರಕಾರ, ಬಸ್ ಕಂಡಕ್ಟರ್ ಮೊದಲು ಪ್ರಯಾಣಿಕರಿಗೆ ಮೊಬೈಲ್ ಫೋನ್ ಸ್ಪೀಕರ್ಗಳಲ್ಲಿ ಹಾಡುಗಳನ್ನು ಪ್ಲೇ ಮಾಡಬಾರದು ಎಂದು ಸೂಚನೆ ನೀಡಬೇಕು. ಅದನ್ನು ಪ್ರಯಾಣಿಕರು ಪಾಲಿಸದಿದ್ದರೆ ಚಾಲಕ ಅಥವಾ ಕಂಡಕ್ಟರ್ ವ್ಯಕ್ತಿಯನ್ನು ಬಸ್ನಿಂದ ಇಳಿಯಲು ಹೇಳಬಹುದು. ವ್ಯಕ್ತಿ ಇಳಿಯುವವರೆಗೂ ಚಾಲಕ ಬಸ್ಸನ್ನು ನಿಲ್ಲಿಸಬಹುದು ಎಂದು ತಿಳಿಸಿದೆ.
ಇನ್ನು ಕೆಲ ಪ್ರಯಾಣಿಕರ ಇಂತಹ ವರ್ತನೆಯಿಂದ ಸಹ ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದು, ಈ ಪ್ರವೃತ್ತಿ ನಿಯಂತ್ರಿಸ ಬೇಕು ಎಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.
ಈ ನಿಯಮವನ್ನು ಜಾರಿಗೆ ತರುವಂತೆ ರಾಜ್ಯ ಸಾರಿಗೆ ಇಲಾಖೆಯು ಕೆಎಸ್ಆರ್ಟಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಪತ್ರ ಬರೆದಿದೆ.