ಬೆಂಗಳೂರು, ನ.12 (DaijiworldNews/PY): "ಬಿಟ್ ಕಾಯಿನ್ ವಿಚಾರದಲ್ಲಿ ಈಗಾಗಲೇ ತನಿಖೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಸ್ಪಷ್ಟನೆ ನೀಡಲಾಗಿದೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಬಿ"ಟ್ ಕಾಯಿನ್ ವಿಚಾರದಲ್ಲಿ ಈಗಾಗಲೇ ತನಿಖೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಸ್ಪಷ್ಟನೆ ನೀಡಲಾಗಿದೆ. ಆದರೆ ಕಾಂಗ್ರೆಸ್ ನಾಯಕರು ಅನಗತ್ಯ ವಿವಾದ ಸೃಷ್ಟಿಸುತ್ತಿದ್ದಾರೆ. ಸೂಕ್ತ ದಾಖಲೆಗಳಿದ್ದರೆ ಮಂಡಿಸಿ ಎಂದು ಈಗಾಗಲೇ ಹೇಳಿದ್ದೇನೆ" ಎಂದಿದ್ದಾರೆ.
"ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ ಎಂದು ಈಗಾಗಲೇ ಹೇಳಿದ್ದೇನೆ. ಕಾಂಗ್ರೆಸ್ ನಾಯಕರ ಕಪೋಲಕಲ್ಪಿತ ಆರೋಪಗಳಿಗೆ ಮತ್ತೆ ಮತ್ತೆ ಉತ್ತರಿಸುವ ಅಗತ್ಯವಿಲ್ಲ" ಎಂದು ಹೇಳಿದ್ದಾರೆ.