ಬೆಂಗಳೂರು, ನ.13 (DaijiworldNews/PY): "ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 14ರಂದು ದಕ್ಷಿಣ ವಲಯದ ಸಮನ್ವಯದಲ್ಲಿ ಸಂಬಂಧಿಸಿದಂತೆ ತಿರುಪತಿಯಲ್ಲಿ ಮುಖ್ಯಮಂತ್ರಿಗಳ ಸಮ್ಮೇಳನ ನಡೆಯಲಿದ್ದು, ಇದರಲ್ಲಿ ನಾನೂ ಭಾಗವಹಿಸುತ್ತೇನೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುಜರಾತ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಸನ್ಮಾನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
"ಇದಕ್ಕೆ ಸಂಬಂಧಿಸಿದಂತೆ ಇಂದು ಪೂರ್ವಭಾವಿಯಾಗಿ ಸಭೆ ನಡೆಸಿ, ಸಮ್ಮೇಳನದಲ್ಲಿ ಪ್ರಸ್ತಾಪಿಸಬೇಕಾದ ಅಂಶಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ" ಎಂದು ಹೇಳಿದ್ದಾರೆ.