ಬೆಂಗಳೂರು, ನ.13 (DaijiworldNews/PY): "ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ. ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ" ಎಂದು ರಾಜ್ಯ ಬಿಜೆಪಿ ಲೇವಡಿ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, "ಭವಾನಿ ರೇವಣ್ಣ ಅವರಿಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ಟಿಕೆಟ್ ನೀಡಬೇಕೆಂಬ ಬಗ್ಗೆ ಪ್ರಸ್ತಾಪವಾಗಿದೆ. ಕಾರ್ಯಕರ್ತರ ಭಾವನೆಗೆ ಬೆಲೆ ನೀಡಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಒಪ್ಪಿಗೆ ಸೂಚಿಸಿದ್ದಾರೆ. ಕುಟುಂಬ ರಾಜಕಾರಣದ ಇನ್ನೊಂದು ಮುಖ ಅನಾವರಣವೇ?" ಎಂದು ಪ್ರಶ್ನಿಸಿದೆ.
"ಓಲೈಕೆ ರಾಜಕಾರಣ ಕಾಂಗ್ರೆಸ್ ಸಿದ್ಧಾಂತ. ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಈ ಎರಡು ಪಕ್ಷಗಳು ಕುಟುಂಬವಾದಕ್ಕೆ ಮಣೆ ಹಾಕುತ್ತಿರುವುದು ಪ್ರಜಾಪ್ರಭುತ್ವದ ವ್ಯಂಗ್ಯ" ಎಂದಿದೆ.
"ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ, ರೇವಣ್ಣ, ಸೂರಜ್ ರೇವಣ್ಣ, ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ" ಎಂದು ಹೇಳಿದೆ.