ಮುಂಬೈ, ನ.13 (DaijiworldNews/PY): "ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಶನಿವಾರ ಪೊಲೀಸರು ಬಂಡುಕೋರರ ವಿರುದ್ದ ನಡೆಸಿದ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
"ಮುಂಬೈನಿಂದ 920 ಕಿ.ಮೀ ದೂರದಲ್ಲಿರುವ ಜಿಲ್ಲೆಯ ಗ್ಯಾರಹ್ಬತ್ತಿ ಅರಣ್ಯ ಪ್ರದೇಶದ ಧನೋರಾಲ್ಲಿ ಶನಿವಾರ ಬೆಳಗ್ಗೆ ಪೊಲೀಸ್ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭ ಗುಂಡಿನ ಕಾಳಗ ನಡೆದಿದೆ" ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, "ಬಂಡುಕೋರರು ಪೊಲೀಸ್ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ" ಎಂದು ಹೇಳಿದ್ದಾರೆ.
"ಗುಂಡಿನ ದಾಳಿಯಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ. ಅಂತಿಮ ವರದಿ ಬಂದಾಗ ಕಾರ್ಯಾಚರಣೆ ಮುಂದುವರಿದಿತ್ತು" ಎಂದು ಅಧಿಕಾರಿ ತಿಳಿಸಿದ್ದಾರೆ.