ಬೆಂಗಳೂರು, ನ.13 (DaijiworldNews/HR): ಕಾಂಗ್ರೆಸ್ ನಾಯಕರ ಬಳಿ ಬಿಟ್ ಕಾಯಿನ್ ಪ್ರಕರಣ ಸಂಬಂಧ ದಾಖಲೆಗಳಿದ್ದರೆ ಬಿಡುಗಡೆ ಮಾಡಲು ವಿಳಂಬ ಮಾಡುತ್ತಿರುವು ಯಾಕೆ? ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣವನ್ನು ಈಗಾಗಲೇ ರಾಜ್ಯ ಸರ್ಕಾರ ಜಾರಿ ನಿರ್ದೇಶನಾಲಯ(ಇಡಿ) ಮತ್ತು ಇಂಟರ್ಪೆಪೋಲ್ಗೆ ವಹಿಸಿದ್ದು, ಕಾಂಗ್ರೆಸ್ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲು ಮೀನಾಮೇಷ ಏಕೆ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಮಕ್ಕಳ ಹೆಸರು ಕೂಡ ಕೇಳಿಬರುತ್ತಿದ್ದು, ಚಾರ್ಜ್ಶೀಟ್ನಲ್ಲಿ ಇದು ಉಲ್ಲೇಖವೂ ಆಗಿದೆ. ದಾಖಲೆ ಸಿಕ್ಕರೆ ಅವರನ್ನು ಬಂಧಿಸಬೇಕಾಗುತ್ತದೆ. ಕಾನೂನಿಗಿಂತ ಯಾರೊಬ್ಬರೂ ದೊಡ್ಡವರಲ್ಲ. ಎಂದಿದ್ದಾರೆ.
ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧವಾಗ್ದಾಳಿ ನಡೆಸಿದ ರೇಣುಕಾಚಾರ್ಯ, "ನೀವು ರಾಜಕಾರಣಕ್ಕೆ ಬರುವ ಮುನ್ನ ನಿಮ್ಮ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ಸಾರ್ವಜನಿಕವಾಗಿ ಬಹಿರಂಗಪಡಿಸಿ" ಎಂದು ಸವಾಲು ಹಾಕಿದ್ದಾರೆ.