ಮುಂಬೈ, ನ.13 (DaijiworldNews/PY): ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಮಾಜಿ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಸಚಿನ್ ವಾಜೆ ಅವರ ಪೊಲೀಸ್ ಕಸ್ಟಡಿ ಅವಧಿಯನ್ನು ಸ್ಥಳೀಯ ನ್ಯಾಯಾಲಯ ನ.15ರವರೆಗೆ ವಿಸ್ತರಣೆ ಮಾಡಿದೆ.
ಉದ್ಯಮಿ ಬಿಮಲ್ ಅಗರ್ವಾಲ್ ಅವರು ನೀಡಿರುವ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರ ಅಪರಾಧ ವಿಭಾಗವು ನವೆಂಬರ್ 1ರಂದು ವಾಜೆ ಅವರನ್ನು ಕಸ್ಟಡಿಗೆ ತೆಗೆದುಕೊಂಡಿತ್ತು. ಇದರಲ್ಲಿ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಕೂಡಾ ಆರೋಪಿಯಾಗಿದ್ದಾರೆ.
ಶನಿವಾರ ಸಚಿನ್ ವಾಜೆ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ಅವರನ್ನು ಹೆಚ್ಚಿನ ತನಿಖೆಗಾಗಿ ತಮ್ಮ ವಶಕ್ಕೆ ಒಪ್ಪಿಸಬೇಕು ಎಂದು ಪೊಲೀಸರು ಮನವಿ ಮಾಡಿದರು. ನ.15ರವರೆಗೆ ನ್ಯಾಯಾಲಯ ಕಸ್ಟಡಿ ಅವಧಿಯನ್ನು ವಿಸ್ತರಿಸಿದೆ.