ಜಮ್ಮು, ನ.13 (DaijiworldNews/HR): ಜನರು ಕೋಮುವಾದದ ಹೆಸರಿನಲ್ಲಿ ಕಚ್ಚಾಡುವುದನ್ನು ಬಿಜೆಪಿ, ಆರ್ಎಸ್ಎಸ್ ಮತ್ತು ಜನ ಸಂಘ ಬಯಸುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿ ಮತ್ತು ಆರ್ಎಸ್ಎಸ್ ಪ್ರಚಾರ ಮಾಡುತ್ತಿರುವುದು ಸನಾತನ ಧರ್ಮವಲ್ಲ. ಬಿಜೆಪಿಯು ಸಂಪೂರ್ಣ ಸನಾತನ ಧರ್ಮಕ್ಕೆ ವಿರುದ್ಧವಾಗಿದೆ ಎಂದರು.
ಇನ್ನು ಸನಾತನ ಧರ್ಮವು ಕೋಮುವಾದವನ್ನು ಬೋಧಿಸುವುದಿಲ್ಲ. ಜನರು ಕೋಮುವಾದದ ಹೆಸರಿನಲ್ಲಿ ಕಚ್ಚಾಡುವುದನ್ನು ಬಿಜೆಪಿ, ಆರ್ಎಸ್ಎಸ್ ಮತ್ತು ಜನ ಸಂಘ ಬಯಸುತ್ತವೆ. ಅವರು ಹಿಂದೂ ಧರ್ಮ ಮತ್ತು ಹಿಂದುತ್ವವನ್ನು ಹೈಜಾಕ್ ಮಾಡಿದ್ದಾರೆ" ಎಂದಿದ್ದಾರೆ.
ಬಿಜೆಪಿ ಮತ್ತು ಆರ್ಎಸ್ಎಸ್, ಧರ್ಮದ ಹೆಸರಿನಲ್ಲಿ ಹಿಂಸಾಚಾರ ಮತ್ತು ಗಲಭೆಗಳನ್ನು ಸೃಷ್ಟಿಸಿದರೆ, ಧರ್ಮದ ಹೆಸರಿನಲ್ಲಿ ಮತ್ತೊಬ್ಬರನ್ನು ಕೊಲ್ಲುವವರಿಗಿಂತ ಹೇಗೆ ವಿಭಿನ್ನವೆನಿಸಿಕೊಳ್ಳುತ್ತವೆ ಎಂದು ಪ್ರಶ್ನಿಸಿದ್ದಾರೆ.