ಮುಂಬಯಿ, ನ.13 (DaijiworldNews/HR): ಪೊಲೀಸರು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ 26 ಮಾವೋವಾದಿಗಳು ಹತರಾಗಿರುವ ಘಟನೆ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಭಾರೀ ಎನ್ಕೌಂಟರ್ ನಡೆದಿದೆ.
ಸಾಂದರ್ಭಿಕ ಚಿತ್ರ
ಧನೋರಾ ತಾಲೂಕಿನ ಗರಬಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದ ಈ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗಡ್ಚಿರೋಲಿ ಎಸ್ಪಿ ಅಂಕಿತ್ ಗೋಯಲ್ ತಿಳಿಸಿದ್ದಾರೆ.
ಇನ್ನು ಎನ್ಕೌಂಟರ್ನಲ್ಲಿ ಸಾವನ್ನಪ್ಪಿರುವ ಆರು ಮಾವೋವಾದಿಗಳ ಶವಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿದ್ದು, ಘಟನಾ ಸ್ಥಳದಲ್ಲಿ ಕೂಂಬಿಂಗ್ ಮುಂದುವರಿದಿದೆ.
ಹೆಚ್ಚುವರಿ ಎಸ್ ಪಿ ಸೌಮ್ಯ ಮುಂಡೆ ನೇತೃತ್ವದಲ್ಲಿ ಸಿ-60 ಪೊಲೀಸ್ ಕಮಾಂಡೋ ಪಡೆ ಶೋಧ ಕಾರ್ಯ ನಡೆಸುತ್ತಿದ್ದಾಗ ಮರ್ಡಿಂಟೋಲಾ ಅರಣ್ಯ ಪ್ರದೇಶದ ಕೊರ್ಚಿಯಲ್ಲಿ ಇಂದು ಬೆಳಗ್ಗೆ ಎನ್ ಕೌಂಟರ್ ನಡೆದಿರುವುದಾಗಿ ಗೋಯಲ್ ತಿಳಿಸಿದ್ದಾರೆ.