ದೆಹಲಿ, ನ.13 (DaijiworldNews/HR): ಪ್ಯಾರಾಲಿಂಪಿಯನ್ ಸುಹಾಸ್ ಯತಿರಾಜ್ ಅವರಿಗೆ ಇಂದು ನವದೆಹಲಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಅರ್ಜುನ ಪುರಸ್ಕಾರ ಪ್ರದಾನ ಮಾಡಿದ್ದಾರೆ.
2020ರ ಟೋಕಿಯೋ ಪ್ಯಾರಾಲಿಂಪಿಕ್ಸ್ನ ಬ್ಯಾಡ್ಮಿಂಟನ್ ಸಿಂಗಲ್ಸ್ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಸುಹಾಸ್ ಯತಿರಾಜ್ ಅವರು ಮೂಲತಃ ಕರ್ನಾಟಕದ ಹಾಸನ ಜಿಲ್ಲೆಯವರಾಗಿದ್ದು, ಪ್ರಸ್ತುತ ಉತ್ತರ ಪ್ರದೇಶದ ಗೌತಮಬುದ್ಧ ನಗರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇನ್ನು ಪ್ಯಾರಾಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಪಡೆದ ದೇಶದ ಮೊದಲ ಐಎಎಸ್ ಅಧಿಕಾರಿ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.
ಕೆಲವು ದಿನಗಳ ಹಿಂದೆ ಅರ್ಜುನ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಪ್ರಕಟಗೊಂಡಿದ್ದು, ಅದರಲ್ಲಿ 35 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.