ನವದೆಹಲಿ, ನ.14 (DaijiworldNews/PY): ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್ಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಲು ನವೆಂಬರ್ 14ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ.
ಮಕ್ಕಳ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಭಕೋರಿದ್ದು, "ಜವಾಹರ್ಲಾಲ್ ನೆಹರೂ ಅವರ ಜನ್ಮಜಯಂತಿಗೆ ಗೌರವ ನಮನಗಳು" ಎಂದು ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು, "ದೇಶದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು. ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೂ ಮಕ್ಕಳ ದಿನಾಚರಣೆಯ ಪ್ರೀತಿಪೂರ್ವಕ ಶುಭಕಾಮನೆಗಳು" ಎಂದು ತಿಳಿಸಿದ್ದಾರೆ.
"ಸ್ವಾತಂತ್ರ್ಯ ಚಳವಳಿಯ ಮುಂಚೂಣಿ ನಾಯಕ, ಪ್ರಥಮ ಪ್ರಧಾನಮಂತ್ರಿ, ಭಾರತರತ್ನ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜಯಂತಿಯಂದು, ಅವರ ಸಂಸ್ಮರಣೆಗಳ ಜೊತೆಗೆ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಸದೃಢ, ಸಶಕ್ತ, ಸಮೃದ್ಧ ಭಾರತಕ್ಕಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆ ನಮ್ಮೆಲ್ಲರ ಹೊಣೆಗಾರಿಕೆ" ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.