ನವದೆಹಲಿ, ನ.14 (DaijiworldNews/PY): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಣಿಪುರದಲ್ಲಿ ಉಗ್ರರ ದಾಳಿ ನಡೆದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ವಾಗ್ದಾಳಿ ನಡೆಸಿರುವ ಅವರು, "ಪ್ರಧಾನಿ ನರೇಂದ್ರ ಮೋದಿ ದೇಶ ರಕ್ಷಣೆಯಲ್ಲಿ ಅಸಮರ್ಥರು ಎನ್ನುವುದು ಈ ದಾಳಿಯ ಮೂಲಕ ಮತ್ತೊಮ್ಮೆ ಸಾಬೀತಾಗಿದೆ" ಎಂದಿದ್ಧಾರೆ.
"ಮಣಿಪುರದಲ್ಲಿ ಸೇನಾ ಬೆಂಗಾವಲು ಪಡೆಯ ಮೇಲೆ ನಡೆದ ಭಯೋತ್ಪಾದ ದಾಳಿಯು ಪ್ರಧಾನಿ ಮೋದಿ ಸರ್ಕಾರಕ್ಕೆ ರಾಷ್ಟ್ರವನ್ನು ರಕ್ಷಿಸಲು ಅಸಮರ್ಥವಾಗಿದೆ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ" ಎಂದು ತಿಳಿಸಿದ್ದಾರೆ.
"ಹುತಾತ್ಮರಿಗೆ ಹಾಗೂ ಅವರ ಕುಟುಂಬಗಳಿಗೆ ನನ್ನ ಸಂತಾಪ. ನಿಮ್ಮ ಬಲಿದಾನವನ್ನು ದೇಶ ಸ್ಮರಿಸುತ್ತದೆ" ಎಂದಿದ್ದಾರೆ.
ಮಣಿಪುರದಲ್ಲಿ ಶನಿವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಅಸ್ಸಾಂ ರೈಫಲ್ಸ್ನ ಕರ್ನಲ್ ವಿಪ್ಲವ್ ತ್ರಿಪಾಠಿ ಹಾಗೂ ಅವರ ಪತ್ನಿ, ಪುತ್ರ, ಅರೆಸೇನಾಪಡೆಯ ಇನ್ನಿತರ ನಾಲ್ವರು ಸಿಬ್ಬಂದಿಗಳು ಸಾವನ್ನಪ್ಪಿದ್ದರು.