ಮೈಸೂರು, ನ.14 (DaijiworldNews/HR): ನನ್ನನ್ನು ಪೇಪರ್ ಸಿಂಹ ಅಂದರೆ ನನಗೆ ಬೇಸರವಿಲ್ಲ. ಯಾಕೆಂದರೆ ನಾನು ಪತ್ರಿಕೆ ಮೂಲಕವೇ ಘರ್ಜಿಸಿ ಈ ಸ್ಥಾನಕ್ಕೆ ಬಂದಿದ್ದೇನೆ. ಪ್ರಿಯಾಂಕ ಖರ್ಗೆ ಹೆಸರು ಗಂಡೋ ಹೆಣ್ಣೋ ಎಂಬ ಕ್ಲಾರಿಟಿ ಇಲ್ಲ. ಅವರು ರಾಜೀವ್ಗಾಂಧಿ ಮಗಳ ಹೆಸರನ್ನು ಇಟ್ಟುಕೊಂಡಿದ್ದಾರೆ" ಎಂದು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮರಿ ಖರ್ಗೆ ಶೋಷಿತರ ಹೆಸರು ಹೇಳಿಕೊಂಡು ಐಷಾರಾಮಿ ಜೀವನ ಮಾಡುತ್ತಿದ್ದಾರೆ. ಮರಿ ಖರ್ಗೆ ಬಾಯಲ್ಲಿ ಭ್ರಷ್ಟಾಚಾರದ ಮಾತು ಕೇಳಿದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಆಗುತ್ತಿದೆ" ಎಂದರು.
ಇನ್ನು "ರಾಜ್ಯ ಕಾಂಗ್ರೆಸ್ನವರೇ ದುಡ್ಡು ಕಳೆದುಕೊಂಡಿದ್ದಾರೆ. ಹೀಗಾಗಿ ಅವರು ಮಾತ್ರ ಮಾತನಾಡುತ್ತಿದ್ದಾರೆ. ನಮ್ಮ ಪಕ್ಷದವರೇ ಬಿಟ್ ಕಾಯಿನ್ ಪ್ರಕರಣದಲ್ಲಿ ಇದ್ದಿದ್ದರೆ ಶ್ರೀಕಿಯನ್ನು ನಾವು ಯಾಕೆ ಬಂಧಿಸುತ್ತಿದೆವು" ಎಂದು ವಾಗ್ದಾಳಿ ನಡೆಸಿದ್ದಾರೆ.