ಬೆಂಗಳೂರು, ನ.14 (DaijiworldNews/PY): "ಶಂಕಿತ ಬಿಟ್ ಕಾಯಿನ್ ಹಗರಣದಿಂದ ಸಿದ್ದರಾಮಯ್ಯ ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ" ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, "ಶಂಕಿತ ಬಿಟ್ ಕಾಯಿನ್ ಹಗರಣದಿಂದ ಸಿದ್ದರಾಮಯ್ಯ ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ. ತಮ್ಮನ್ನು ಸುತ್ತಿಕೊಂಡ ದಲಿತ ವಿರೋಧಿ ಆರೋಪದಿಂದ ತಪ್ಪಿಸಿಕೊಳ್ಳುವುದು. ಬಿಜೆಪಿ ವಿರುದ್ಧ ಸಲ್ಲದ ಅಪಪ್ರಚಾರ ನಡೆಸುವುದು" ಎಂದಿದೆ.
"ಡಿಕೆಶಿ ವಿರುದ್ಧ ಮಾತನಾಡಿದ್ದ ತಮ್ಮ ಆಪ್ತ ಉಗ್ರಪ್ಪ ಅವರನ್ನು ಶಿಸ್ತುಕ್ರಮದಿಂದ ರಕ್ಷಿಸುವುದು. ಮೊಹಮ್ಮದ್ ನಲಪಾಡ್ ಅವರಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತಪ್ಪಿಸುವುದು. ಡಿಕೆಶಿ ಅವರನ್ನು ರಾಜಕೀಯವಾಗಿ ಮೂಲೆಗುಂಪು ಮಾಡುವುದು" ಎಂದು ಹೇಳಿದೆ.