ಬೆಂಗಳೂರು, ನ.14 (DaijiworldNews/HR): ರಾಜ್ಯದಲ್ಲಿ ಭಾನುವಾರ 236 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 236 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,91,850 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಇಲ್ಲಿವರೆಗೆ ಒಟ್ಟು 38,145 ಸೋಂಕಿತರು ಮೃತಪಟ್ಟಿದ್ದಾರೆ.
264 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 29,45,679 ಜನ ಗುಣಮುಖರಾಗಿದ್ದಾರೆ.
ಪಾಸಿಟಿವಿಟಿ ದರ ಶೇಕಡ 0.24 ರಷ್ಟು ಇದ್ದು, ರಾಜ್ಯದಲ್ಲಿ 7997 ಸಕ್ರಿಯ ಪ್ರಕರಣಗಳು ಇವೆ.