ಬುಲಂದ್ಶಹರ್, ನ.14 (DaijiworldNews/HR): ಕಾಂಗ್ರೆಸ್ ಪಕ್ಷವು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾನುವಾರ ಘೋಷಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ. ಅಲ್ಲದೇ, ಚುನಾವಣೆಯಲ್ಲಿ ಎಲ್ಲ ಸ್ಥಾನಗಳಲ್ಲೂ, ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ" ಎಂದು ಕಾರ್ಯಕರ್ತರಿಗೆ ತಿಳಿಸಿದ್ದಾರೆ.
ಇನ್ನು ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶವು ಅಚ್ಚರಿ ಮೂಡಿಸಲಿದೆ ಎಂದು ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಭವಿಷ್ಯ ನುಡಿದಿದ್ದಾರೆ.