ಲಕ್ನೋ, ನ.15 (DaijiworldNews/PY): "ದಲಿತರೊಂದಿಗೆ ಚಹಾ ಸೇವಿಸಿ, ಅವರು ಬಿಜೆಪಿಗೆ ಮತ ನೀಡುವಂತೆ ಪಕ್ಷದ ಕಾರ್ಯಕರ್ತರು ಮನವೊಲಿಸಬೇಕು" ಎಂದು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಹೇಳಿದ್ದಾರೆ.
ಚುನಾವಣೆ ಹಿನ್ನೆಲೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ ಅವರು, "ನೂರು ದಲಿತರೊಂದಿಗೆ ಚಹಾ ಸೇವಿಸಿ. ಮತ ಚಲಾಯಿಸಬೇಕಾಗಿರುವುದು ರಾಷ್ಟ್ರೀಯತೆಯ ಆಧಾರದಲ್ಲಿಯೇ ಹೊರತು ಜಾತಿ, ಹಣ ಅಥವಾ ಧರ್ಮದ ಆಧಾರದಲ್ಲಿ ಅಲ್ಲ ಎನ್ನುವುದನ್ನು ಅವರಿಗೆ ಮನವರಿಕೆ ಮಾಡುವುದು ಮುಖ್ಯ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸುವಂತೆ ಮನವೊಲಿಸಬೇಕು" ಎಂದಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಉತ್ತರಪ್ರದೇಶ ಸಿಎಂ ಆದಿತ್ಯನಾಥ್ ನೇತೃತ್ವದಲ್ಲಿ ದಲಿತರ ಮೇಲಿ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದೆ ಎಂದು ಆರೋಪಿಸಿದ್ದರು. ಇದರ ಬೆನ್ನಲೇ ಸ್ವತಂತ್ರ ದೇವ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ.
2022ರಲ್ಲಿ 403 ಸದಸ್ಯ ಬಲದ ಉತ್ತರಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದೆ.