ಮುಂಬೈ, ನ.15 (DaijiworldNews/PY): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಯಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಮತ್ತೆ14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿಯ ಹೆಚ್ಚಿನ ವಿಚಾರಣೆಯ ಅಗತ್ಯ ಇಲ್ಲ ಎಂದ ಜಾರಿ ನಿರ್ದೇಶನಾಲಯದ ಹೇಳಿಕೆಯ ಹಿನ್ನೆಲೆ ಅನಿಲ್ ದೇಶ್ಮುಖ್ ಅವರನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇಂದಿಗೆ ದೇಶ್ಮುಖ್ ಅವರ 14 ದಿನಗಳ ನ್ಯಾಯಾಂಗ ಬಂಧನ ಮುಗಿದ ಹಿನ್ನೆಲೆ ಇಂದು ದೇಶ್ಮುಖ್ ಅವರನ್ನು ವಿಶೇಷ ಪಿಎಂಎಲ್ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ರಾಜ್ಯ ಪೊಲೀಸ್ ಇಲಾಖೆಯ ಮೂಲಕ ಹಣ ಸುಲಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಣ ವರ್ಗಾವಣೆ ಪ್ರಕರಣದಲ್ಲಿ12 ಗಂಟೆಗಳ ಕಾಲ ವಿಚಾರಣೆಯ ಬಳಿಕ ನ.1ರಂದು ದೇಶ್ಮುಖ್ ಅವರನ್ನು ಇಡಿ ಬಂಧಿಸಿತ್ತು.