ಬೆಂಗಳೂರು, ನ. 15 (DaijiworldNews/SM): ಎರಡು ಬಾರಿ ಶ್ರೀಕಿಯನ್ನು ಬಂಧಿಸಿದ್ದು, ಬೇಲ್ ಮೇಲೆ ಬಿಡುಗಡೆ ಮಾಡಿದ್ದು, ಚಾರ್ಜ್ ಶೀಟ್ ದಾಖಲಿಸಿದ್ದು ಬಿಜೆಪಿ ಸರಕಾರ. ಹೀಗಾಗಿ ಅವರೇ ಮಾಹಿತಿ ಕೊಡಬೇಕು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.
ಅವರಿಂದ ಈ ಕೆಲಸ ಆಗುವುದಿಲ್ಲ ಎಂದಾದಲ್ಲಿ ಅದನ್ನು ಅಧಿಕಾರಿಗಳಿಗೆ ಬಿಟ್ಟು ಕೊಡಬೇಕು ಎಂದಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಶ್ರೀಕಿ ವಿರುದ್ಧ ಯಾವ ದೂರೂ ದಾಖಲಾಗಿರಲಿಲ್ಲ. ಪ್ರಕರಣ ದಾಖಲಾಗಿ ವಿಚಾರಣೆ ನಡೆದಿದ್ದು ಬಿಜೆಪಿಯ ಕಾಲದಲ್ಲಿ. ನೀವ್ಯಾಕೆ ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಪ್ರಶ್ನಿಸಿದ್ದೆ. ಈ ಪ್ರಶ್ನೆಗೆ ಮೊದಲು ಉತ್ತರಿಸಿ ಎಂದು ಟ್ವೀಟ್ ಮಾಡಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಬಿಟ್ ಕಾಯಿನ್ ಹಗರಣ ಎಲ್ಲಿಯಾದರೂ ವರದಿಯಾಗಿತ್ತೇ? ಯಾರಾದರೂ ಬಿಜೆಪಿ ನಾಯಕರು ಪ್ರಸ್ತಾಪ ಮಾಡಿದ್ದರೆ? ಆ ಕಾಲದಲ್ಲಿ ಅವರಿಗೆ ಇದು ಗೊತ್ತಿತ್ತೇ?
ಗೊತ್ತಿದ್ದರೂ ಮುಚ್ಚಿಟ್ಟಿದ್ದರೇ? ಎನ್ನುವ ಪ್ರಶ್ನೆಯನ್ನು ಬಿಜೆಪಿಗೆ ಸಿದ್ದರಾಮಯ್ಯ ಮಾಡಿದ್ದಾರೆ.