ಬೆಂಗಳೂರು. ನ.16 (DaijiworldNews/HR): ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದೆ.
ಸಾಂದರ್ಭಿಕ ಚಿತ್ರ
ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಅಭ್ಯರ್ಥಿಯು 10,000 ರೂ.ಹಾಗೂ ಪರಿಶಿಷ್ಟ ವರ್ಗದ ಅಭ್ಯರ್ಥಿ 5,000 ರೂ. ಠೇವಣಿ ಇಡಬೇಕು.
ಇನ್ನು ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ನವೆಂಬರ್ 23 ರ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಡಿಸೆಂಬರ್ 10ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಬೆಳಗ್ಗೆ 8 ರಿಂದ ಸಂಜೆ4 ರವರೆಗೆ ಮತದಾನ ನಡೆಯಲಿದೆ.