ಶ್ರೀನಗರ, ನ.16 (DaijiworldNews/HR): ಭಾರತೀಯ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈದ ಘಟನೆ ಜಮ್ಮುಕಾಶ್ಮೀರದ ಶ್ರೀನಗರದಲ್ಲಿ ಇಂದು ನಡೆದಿದೆ.
ಸಾಂದರ್ಭಿಕ ಚಿತ್ರ
ಭಾರತೀಯ ಸೇನೆ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಇಂದು ಬೆಳ್ಳಗ್ಗೆ ದಾಳಿ ನಡೆಸಿದ್ದು, ದಾಳಿ ವೇಳೆ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಇನ್ನು ಭಾರತೀಯ ಸೇನೆಯು ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.