ಕೊಪ್ಪಳ, ನ 16 (DaijiworldNews/MS): "ಪ್ರತಾಪ್ ಸಿಂಹ ಸಂಸದ ಆಗೋದಕ್ಕೆ ಲಾಯಕ್ಕಿಲ್ಲ. ಆತ ಝೀರೋ ಟ್ಯಾಲೆಂಟ್, ಮೊದಲು ಆತ ಗಂಡೋ, ಹೆಣ್ಣೋ ಚೆಕ್ ಮಾಡಬೇಕು" ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸಂಸದ ಪ್ರತಾಪ್ ಸಿಂಹ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಪ್ರತಾಪ್ ಸಿಂಹ, ಪ್ರಿಯಾಂಕಾ ಖರ್ಗೆ ವಿರುದ್ಧ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, "ಪ್ರತಾಪ್ ಸಿಂಹ ಝೀರೋ ಟ್ಯಾಲೆಂಟ್. ಆತನಿಗೆ ಯಾವುದೋ ಗಾಳಿಯಲ್ಲಿ ಜನ ವೋಟ್ ಹಾಕಿದ್ದಾರೆ . ಪ್ರತಾಪ್ ಸಿಂಹ ತಕ್ಷಣ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಹೋರಾಟ ಮಾಡಲಾಗುವುದು. ಖರ್ಗೆ ವಿರುದ್ಧ ಅಷ್ಟೆ ಅಲ್ಲ, ಅನೇಕ ಕಾಂಗ್ರೆಸ್ ನಾಯಕರ ವಿರುದ್ಧ ಬಾಯಿಗೆ ಬಂದಂತೆ ಮಾತಾಡ್ತಾರೆ. ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ನಾಯಕರುಗಳೇ ಇದ್ದಾರೆ. ರಾಜ್ಯದಿಂದ ಹಿಡಿದು ಅಂತರಾಷ್ಟ್ರೀಯ ಮಟ್ಟದ ದೊಡ್ಡ ಹಗರಣದಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ" ಎಂದು ಆರೋಪಿಸಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಂಸದ ಪ್ರತಾಪ್ , ಶೋಷಿತರ ಹೆಸರು ಹೇಳಿಕೊಂಡು ಮರಿ ಖರ್ಗೆ ಐಷಾರಾಮಿ ಜೀವನ ಮಾಡುತ್ತಿದ್ದಾರೆ. ಮರಿ ಖರ್ಗೆ ಬಾಯಲ್ಲಿ ಭ್ರಷ್ಟಾಚಾರದ ಮಾತು ಕೇಳಿದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಆಗುತ್ತಿದೆ ಎಂದು ಹೇಳಿದ್ದರು.