ಲಕ್ನೋ, ನ 16 (DaijiworldNews/MS): ಉತ್ತರ ಪ್ರದೇಶದಸುಲ್ತಾನ್ಪುರ ಜಿಲ್ಲೆಯ ಕರ್ವಾಲ್ ಖೇರಿಯಲ್ಲಿ ಉತ್ತರ ಪ್ರದೇಶದಲ್ಲಿ ₹ 22,500 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ 340 ಕಿಮೀ ಪೂರ್ವಾಂಚಲ್ಎಕ್ಸ್ಪ್ರೆಸ್ವೇಗೆ ಚಾಲನೆ ನೀಡಿದ್ದಾರೆ.
ಎಕ್ಸ್ಪ್ರೆಸ್ವೇಯಲ್ಲಿ ವಾಯುಪಡೆಯ ಸಿ-130 ಜೆ ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿದ ಅವರು ಉದ್ಘಾಟನಾ ಕಾರ್ಯಕ್ರಮದ ಬಳಿಕ ತುರ್ತು ಪರಿಸ್ಥಿತಿಯಲ್ಲಿ ಐಎಎಫ್ ಯುದ್ಧ ವಿಮಾನಗಳನ್ನು ಲ್ಯಾಂಡಿಂಗ್ ಮತ್ತು ಟೇಕ್-ಆಫ್ ಮಾಡಲು ಅನುವು ಮಾಡಿಕೊಡಲು ಎಕ್ಸ್ಪ್ರೆಸ್ವೇಯಲ್ಲಿ ನಿರ್ಮಿಸಲಾದ 3.2 ಕಿಮೀ ಉದ್ದದ ಏರ್ಸ್ಟ್ರಿಪ್ನಲ್ಲಿ ಭಾರತೀಯ ವಾಯುಪಡೆ (IAF) ವೈಮಾನಿಕ ಪ್ರದರ್ಶನವನ್ನು ಪ್ರಧಾನಿ ವೀಕ್ಷಿಸಲಿದ್ದಾರೆ.
ಆ ಬಳಿಕ ಸಾರ್ವಜನಿಕ ಸಭೆಯನ್ನು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಈ ಎಕ್ಸ್ಪ್ರೆಸ್ವೇ ಉತ್ತರ ಪ್ರದೇಶವನ್ನು ಒಗ್ಗೂಡಿಸುತ್ತದೆ. ನಾನು ಮೂರು ವರ್ಷಗಳ ಹಿಂದೆ ಪೂರ್ವಾಂಚಲ್ ಎಕ್ಸ್ಪ್ರೆಸ್ವೇಗೆ ಶಂಕುಸ್ಥಾಪನೆ ಮಾಡಿದಾಗ, ನಾನು ಒಂದು ದಿನ ಇಲ್ಲಿ ವಿಮಾನದಲ್ಲಿ ಇಳಿಯುತ್ತೇನೆ ಎಂದು ನಾನು ಭಾವಿಸಿರಲಿಲ್ಲ. ಈ ಪ್ರದೇಶದ ಜನರು ಬ್ರಿಟಿಷರಿಗೆ ಸವಾಲು ಹಾಕಿದ್ದರು. ಹೆದ್ದಾರಿ ನಿರ್ಮಾಣದಿಂದ ಬಡವರು, ಮಧ್ಯಮ ವರ್ಗದವರು, ರೈತರು ಮತ್ತು ವ್ಯಾಪಾರಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.