ಶ್ರೀನಗರ, ನ.16 (DaijiworldNews/HR): ಸೋಮವಾರ ಹೈದರ್ಪೋರಾದಲ್ಲಿ ನಡೆದ ಎನ್ಕೌಂಟರ್ ವೇಳೆ ತೀವ್ರವಾಗಿ ಗಾಯಗೊಂಡಿದ್ದ ದಂತವೈದ್ಯರೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸೋಮವಾರ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ದಂತ ಶಸ್ತ್ರಚಿಕಿತ್ಸಕ ಮುದಾಸಿರ್ ಗುಲ್ ಅವರು ಗಾಯಗೊಂಡಿದ್ದು, ಇಂದು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಇನ್ನು ಎನ್ಕೌಂಟರ್ ವೇಳೆ ಇಬ್ಬರು ಉಗ್ರರು ಮತ್ತು ಒಬ್ಬ ಉಗ್ರನ ಸಹಚರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.