ಬೆಂಗಳೂರು, ನ 16 (DaijiworldNews/MS): ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಸೇರಿದಂತೆ ಪ್ರತೀಯೊಂದು ವೇದಿಕೆಯಲ್ಲಿಯೂ ಸರ್ಕಾರದ ವಿರುದ್ಧ ಹರಿಹಾಯುತ್ತಿರುವ ಕಾಂಗ್ರೆಸ್ ವಿರುದ್ದ ಬಿಜೆಪಿಯೂ ಶಂಕೆವ್ಯಕ್ತಪಡಿಸಿದೆ. ಈ ನಡುವೆ "ವಿಪಕ್ಷದವರೇ ಶ್ರೀಕಿಗೆ ಏನಾದರೂ ಮಾಡಿ, ಸರ್ಕಾರದ ತಲೆ ಮೇಲೆ ಹಾಕ್ತಾರಾ ಅಂತಾ ನಮಗೆ ಆತಂಕ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯ ಎನ್ಕೌಂಟರ್ ಆಗುವ ಸಾಧ್ಯತೆ ಇದೆ. ಬಿಜೆಪಿಯೂ ಪೊಲೀಸ್ ಎನ್ಕೌಂಟರ್ ಮುಖೇನ ಆರೋಪಿ ವಿಕಾಸ ದುಬೆಯ ಹತ್ಯೆಯಂತೆಯೇ ಕರ್ನಾಟಕದ ಬಿಜೆಪಿ ಸರ್ಕಾರ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯ ಪೊಲೀಸ್ ಎನ್ ಕೌಂಟರ್ ಮಾಡುವ ಸಾಧ್ಯತೆ ಇದೆ ಎಂದು ಆರೋಪಿಸಿತ್ತು.
ಇದರ ಬೆನ್ನಲ್ಲೇ ಕಾಂಗ್ರೆಸ್ನವರು ಯಾರ ಮೇಲೆ ಬೇಕಾದರೂ ಆರೋಪ ಮಾಡ್ತಾರೆ. ಇವರ ಬಳಿ ಏನಿದೆಎಂದು ನೋಡಿದರೆ ನಾವು ಕೊಟ್ಟ ದಾಖಲೆಗಳು ಮಾತ್ರ. ಬೊಮ್ಮಾಯಿ ಸರ್ಕಾರದ ಕಾರ್ಯ ವೈಖರಿಯನ್ನು ಜನ ಮೆಚ್ಚಿದ್ದಾರೆ. ವಿಪಕ್ಷಕ್ಕೆ ಮಾತನಾಡಲು ಬೇರೆ ವಿಷಯಗಳಿಲ್ಲ. ಹಾಗಾಗಿ ಇಲ್ಲದಿರುವ ವಿಚಾರವನ್ನು ದೊಡ್ಡದು ಮಾಡಿ ಪ್ರಚಾರ ಪಡೆಯುತ್ತಿದ್ದಾರೆ. . ಶ್ರೀಕಿಗೆ ಪ್ರಾಣ ಬೆದರಿಕೆ ಇದೆ ಅಂತ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಹೇಳ್ತಿದ್ದಾರೆ. ಅವರ ಹೇಳಿಕೆ ನೋಡಿದರೆ ನಮಗೆ ಅವರ ಮೇಲೆ ಅನುಮಾನ ಮೂಡುತ್ತಿದೆ. ಅವರೇ ಏನಾದರೂ ಮಾಡಿ, ಸರ್ಕಾರದ ತಲೆ ಮೇಲೆ ಹಾಕ್ತಾರಾ ಅಂತಾ ನಮಗೆ ಆತಂಕ ಇದೆ. ಈ ಬಗ್ಗೆ ನಾನು ಸಿಎಂ ಬೊಮ್ಮಾಯಿ ಬಳಿ ಮಾತನಾಡ್ತೀನಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.