ಬೆಂಗಳೂರು, ನ.16 (DaijiworldNews/HR): ದಿವಂಗತ ನಟ ಪುನೀತ್ ರಾಜ್ಕುಮಾರ್ಗೆ ಮರಣೋತ್ತರವಾಗಿ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಇಂದು ಅರಮನೆ ಮೈದಾನದಲ್ಲಿ ನಡೆಯುತ್ತಿರುವಂತ ಪುನೀತ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, "ಅಗಲಿದ ಪುನೀತ್ ರಾಜ್ಕುಮಾರ್ ಅವರ ಪಾರ್ಥೀವ ಶರೀರದ ದರ್ಶನ ಸಂದರ್ಭದಲ್ಲಿ ನಾನು ಮುತ್ತು ಕೊಟ್ಟ ಬಗ್ಗೆ ಬೇರೆಯವರು ಬೇರೆ ಬೇರೆ ರೀತಿಯಲ್ಲಿ ಅಂದುಕೊಂಡಿದ್ದರು. ಆದ್ರೇ ಆ ಮುತ್ತನ್ನು ಕನ್ನಡಿಗರೆಲ್ಲರ ಪರವಾಗಿ ನೀಡಿದ್ದೇನೆ" ಎಂದರು.
ಇನ್ನು ನಟ ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳ ಕಂಠೀರವ ಸ್ಟುಡೀಯೋದಲ್ಲಿನ ಪುತ್ಥಳಿ ಸೇರಿದಂತೆ ಅಲ್ಲಿನ ಸಮಾಧಿ ನಿರ್ಮಾಣ ಸೇರಿದಂತೆ ವಿವಿಧ ಕೆಲಸವನ್ನು ಸರ್ಕಾರವೇ ಮುಂದೆ ನಿಂತು ಮಾಡಲಿದೆ. ಪುನೀತ್ ಸಮಾಧಿ ಸ್ಥಳ ಅಭಿವೃದ್ಧಿ ಕಾರ್ಯಕ್ಕೆ ಎಲ್ಲಾ ಸಹಕಾರವನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.