ಬೆಂಗಳೂರು, ನ.16 (DaijiworldNews/HR): ನಟಿ ಭಾವನಾ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಮಂಗಳವಾರ ಭೇಟಿಯಾಗಿದ್ದು, ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುರ್ಜೆವಾಲ, "ಕಾಂಗ್ರೆಸ್ನ ಮಾಜಿ ಕಾರ್ಯಕರ್ತೆ, ಕನ್ನಡದ ನಟಿ ಭಾವನಾ ರಾಮಣ್ಣ ಅವರು ನನ್ನನ್ನು ಭೇಟಿಯಾದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸೇರಿ, ಪಕ್ಷಕ್ಕಾಗಿ ದುಡಿಯುವ ಸಂಕಲ್ಪವನ್ನು ಅವರು ಮಾಡಿದ್ದಾರೆ. ಪ್ರತಿಯೊಬ್ಬರ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಪ್ರಾಬಲ್ಯ ಪಡೆಯಲಿದೆ ಎಂದು ನಾನು ನಿಶ್ಚಿತವಾಗಿ ಭಾವಿಸಿದ್ದೇನೆ. ಅವರಿಗೆ ಶುಭಾಶಯಗಳು" ಎಂದು ಹೇಳಿದ್ದಾರೆ.
ಇನ್ನು ಈ ಹಿಂದೆ ಕಾಂಗ್ರೆಸ್ನಲ್ಲೇ ಇದ್ದ ಭಾವನಾ 2018ರ ಮೇ 10ರಂದು ಬಿಜೆಪಿ ಸೇರಿದ್ದರು.