ಬೆಂಗಳೂರು, ನ.16 (DaijiworldNews/HR): ರಾಜ್ಯದಲ್ಲಿ ಇಂದು 255 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 667 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಇಂದು 255 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 7 ಸೋಂಕಿತರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.38 ರಷ್ಟು ಇದೆ. 7493 ಸಕ್ರಿಯ ಪ್ರಕರಣಗಳು ಇವೆ.
ಇನ್ನು ರಾಜ್ಯದಲ್ಲಿ ಇಲ್ಲಿವರೆಗೆ ಒಟ್ಟು ಸೋಂಕಿತರ ಸಂಖ್ಯೆ 29,92,276 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 38,153 ಸೋಂಕಿತರು ಮೃತಪಟ್ಟಿದ್ದಾರೆ. 29,46,601 ಜನ ಗುಣಮುಖರಾಗಿದ್ದಾರೆ.