ನವದೆಹಲಿ, ನ.17 (DaijiworldNews/PY): "ತುಳಿಯುವುದು, ಮೂಲೆಗುಂಪು ಮಾಡುವುದು ಬಿಜೆಪಿ ಸಂಸ್ಕೃತಿ" ಎಂದು ಶಾಸಕ ಜಮೀರ್ ಅಹಮ್ಮದ್ ಖಾನ್ ಟೀಕಿಸಿದ್ದಾರೆ.
"ಕಾಂಗ್ರೆಸ್ನಲ್ಲಿ ಯಾರೂ ಯಾರನ್ನೂ ತುಳಿಯುವುದಿಲ್ಲ. ಅದು ಬಿಜೆಪಿಯ ಸಂಸ್ಕೃತಿ. ರೇಣುಕಾಚಾರ್ಯ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಬೆಂಬಲಿಗರು ಎನ್ನುವ ಕಾರಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ" ಎಂದು ವ್ಯಂಗ್ಯವಾಡಿದ್ದಾರೆ.
"ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕೆಲವು ಮಂದಿ ಘೋಷಣೆ ಕೂಗಿದ್ದಾರೆ. ಆದರೆ, ಅದರಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೇಸರವಾಗಿದ್ದಾರೆ ಎಂದು ಹೇಳುವುದು ಸರಿಯಲ್ಲ. ತಮ್ಮ ಹುಡುಗರ ಪರವಾಗಿ ಘೋಷಣೆ ಕೂಗುತ್ತಿದ್ದಾರೆ ಎಂದರೆ ಅವರಿಗೆ ಸಂತಸವಾಗುತ್ತದೆ. ಘಟನೆಯ ನಂತರ ನಾನು ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೇನೆ. ಅವರಿಗೆ ಯಾವುದೇ ಅಸಮಾಧಾನವಿಲ್ಲ" ಎಂದಿದ್ದಾರೆ.
"ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ ನೇಮಕದ ವಿಚಾರದಲ್ಲಿ ನನಗೆ ಯಾವುದೇ ಅಸಮಾಧಾನವಿಲ್ಲ. ನಾನು ವೈಯುಕ್ತಿಕ ಕಾರಣಕ್ಕೆ ದೆಹಲಿಗೆ ಬಂದಿದ್ದೇನೆ. ಇಂದು ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದೇನೆ" ಎಂದು ಹೇಳಿದ್ದಾರೆ.