ಶ್ರೀನಗರ, ನ. 17 (DaijiworldNews/SM): ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಮತ್ತೆ ಗುಂಡಿನ ಚಕಮಕಿ ನಡೆದ ಬಗ್ಗೆ ವರದಿಯಾಗಿದೆ. ಬುಧವಾರ ಸಂಜೆ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಐವರು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ಕುಲ್ಗಾಂ ಜಿಲ್ಲೆಯ ಪೊಂಬೈ ಮತ್ತು ಗೋಪಾಲ್ಪೋರಾ ಗ್ರಾಮಗಳಲ್ಲಿ ಎನ್ಕೌಂಟರ್ ನಡೆದ ಬಗ್ಗೆ ವರದಿಯಾಗಿದೆ. ಉಗ್ರರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ಪಡೆದ ಸೇನಾಪಡೆ ಕಾರ್ಯಾಚರಣೆ ನಡೆಸಿದೆ ಎಂದು ವರದಿಯಾಗಿದೆ
ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್ಕೌಂಟರ್ ಆಗಿ ಮಾರ್ಪಟ್ಟಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೊಂದೆಡೆ ಸೇನಾಪಡೆ ಕಾರ್ಯಾಚರಣೆ ಮುಂದುವರೆಸಿದೆ ಎಂದು ವರದಿಯಾಗಿದೆ.