ಬೆಂಗಳೂರು, ಅ 18 (DaijiworldNews/MS): ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಜಯ್ ತಂದೆ ರುದ್ರಪ್ಪ ಇವರಿಗೆ 81 ವರ್ಷ ವಯಸ್ಸಾಗಿತ್ತು. ರುದ್ರಪ್ಪ ಅವರನ್ನು ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಗುರುವಾರ ಬೆಳಗ್ಗೆ 7.30ಕ್ಕೆ ಆಸ್ಪತ್ರೆಯಲ್ಲೇ ರುದ್ರಪ್ಪ ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯಕ್ರಿಯೆ ಅನೇಕಲ್ನ ಕುಂಬಾರಹಳ್ಳಿಯಲ್ಲಿ ಇಂದು ಸಂಜೆ ನಡೆಯಲಿದೆ ಕುಟುಂಬದ ಮೂಲಗಳು ತಿಳಿಸಿವೆ.
ಕೆಲ ತಿಂಗಳ ಹಿಂದಷ್ಟೇ ಅಮ್ಮನನ್ನು ಕಳೆದುಕೊಂಡು ದುಃಖದಲ್ಲಿದ್ದ ದುನಿಯಾ ವಿಜಯ್ ಅವರಿಗೆ ಇದೀಗ ಪಿತೃವಿಯೋಗ ಮತ್ತಷ್ಟು ನೋವಿನ ಕೂಪಕ್ಕೆ ತಳ್ಳಿದೆ. ಕಳೆದ ಜುಲೈ 8ರಂದು ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ನಿಧನರಾಗಿದ್ದರು.