ಗದಗ, ನ.18 (DaijiworldNews/PY): "ಹೊಸ ಟ್ರೆಂಡ್ ಸೃಷ್ಟಿಸಿರುವ ಸಿದ್ದರಾಮಯ್ಯ ಬೂಟಾಟಿಕೆ ಹೇಳಿಕೆ ನೀಡಲು ಆರಂಭಿಸಿದ್ದಾರೆ" ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ ಪಕ್ಷದಲ್ಲಿಯೇ ಸಿದ್ದರಾಮಯ್ಯ ಅವರನ್ನು ಸ್ವೀಕರಿಸಲು ಸಿದ್ದರಿಲ್ಲ. ಮೊನ್ನೆ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಡಿ ಕೆ ಶಿವಕುಮಾರ್ ಅವರ ಪರ ಘೋಷಣೆ ಕೂಗಿದ್ದಕ್ಕೆ ಸಿದ್ದರಾಮಯ್ಯ ಕಾರ್ಯಕ್ರಮದಿಂದ ನಿರ್ಗಮಿಸಿದ್ದಾರೆ" ಎಂದಿದ್ದಾರೆ.
"ಸಿದ್ದರಾಮಯ್ಯ ಅವರು ಹಾವಾಡಿಗನ ರೀತಿ ಮಾತನಾಡುತ್ತಿದ್ದಾರೆ. ಸರ್ಕಾರದ ವಿರುದ್ದ ಅಲೆ ಎದ್ದಿದೆ, ಬಿಜೆಪಿ ಕೊಚ್ಚಿ ಹೋಗುತ್ತದೆ ಎಂದು ಹೇಳಿದ್ದರು. ಬಿರುಗಾಳಿ, ಅಲೆ ಎದ್ದಿರುವುದು ಕಾಂಗ್ರೆಸ್ ವಿರುದ್ದ. 2023ರ ಚುನಾವಣೆಗೆ ಕಾಯುವ ಅವಶ್ಯಕತೆ ಇಲ. ಕಾಂಗ್ರೆಸ್ ಪರಿಷತ್ ಚುನಾವಣೆಯಲ್ಲಿಯೇ ಕೊಚ್ಚಿ ಹೋಗುತ್ತದೆ" ಎಂದು ತಿಳಿಸಿದ್ದಾರೆ.