ಬೆಂಗಳೂರು, ನ.18 (DaijiworldNews/PY): "ಡಿಸೆಂಬರ್ 10ರಂದು ನಡೆಯಲಿರುವ ರಾಜ್ಯ ವಿಧಾನಪರಿಷತ್ 25 ಸ್ಥಾನಗಳಿಗೆ ಇಂದು ಸಂಜೆ ಅಥವಾ ನಾಳೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ" ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇಂದು ಅಥವಾ ನಾಳೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಬಳಿಕ ಘೋಷಿತ ಅಭ್ಯರ್ಥಿಗಳಿಂದ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ನಡೆಯಲಿದೆ" ಎಂದು ತಿಳಿಸಿದ್ದಾರೆ.
"ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವಿಧಾನ ಪರಿಷತ್ ಸ್ಥಾನಗಳ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಎನ್ನುವ ಬಗ್ಗೆ ಚರ್ಚೆಯಾಗಿದೆ. ಇದರಂತೆ ಅಭ್ಯರ್ಥಿಗಳ ಪಟ್ಟಿ ಸಹ ಫೈನಲ್ ಮಾಡಲಾಗಿದ್ದು, ಪಟ್ಟಿಯನ್ನು ದೆಹಲಿಗೆ ರಾಜ್ಯಾಧ್ಯಕ್ಷರು ಕಳುಹಿಸಿಕೊಟ್ಟಿದ್ದಾರೆ" ಎಂದಿದ್ದಾರೆ.