ಮೈಸೂರು, ನ.18 (DaijiworldNews/HR): 15 ಕೋಟಿ ರೂ. ಬ್ಯಾಂಕ್ ಬ್ಯಾಲೆನ್ಸ್ ತೊರಿಸಿದವರಿಗೆ ಮಾತ್ರ ವಿಧಾನ ಪರಿಷತ್ ಟಿಕೆಟ್ ಪಡೆಯಲು ಕಾಂಗ್ರೆಸ್ ನಲ್ಲಿ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "15 ಕೋಟಿ ರೂ. ಬ್ಯಾಂಕ್ ಬ್ಯಾಲೆನ್ಸ್ ತೊರಿಸಿದವರಿಗೆ ಮಾತ್ರ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಿಕೆಟ್ ಬಯಸುವವರಿಗೆ ಹೇಳಿದ್ದಾರೆ. ಹೀಗಾದರೆ ಸಾಮಾಜಿಕ ನ್ಯಾಯ ಎಲ್ಲಿ ಸಿಗುತ್ತದೆ ಹೇಳಿ. ಕಾಂಗ್ರೆಸ್ ನಲ್ಲೂ ಕೂಡ ಈಗ ಸಾಮಾಜಿಕ ನ್ಯಾಯ ದೂರವಾಗುತ್ತಿದೆ" ಎಂದರು.
ಇನ್ನು ಎಂಟು ಉಪಚುನಾವಣೆ ನಡೆದಿದ್ದು, ಆ ಸಂದರ್ಭದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ. ಈಗ ಚುನಾವಣೆ ಹತ್ತಿರ ಬಂದಿದೆಯೆಂದು ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಿದ್ದಾರೆ" ಎಂದಿದ್ದಾರೆ.
ಸಿದ್ದರಾಮಯ್ಯನವರು ದಲಿತ ಮುಖ್ಯಮಂತ್ರಿಗೆ ನನ್ನ ಬೆಂಬಲವೆಂದು ಹೇಳುತ್ತಾರೆ. ಮತ್ತೊಂದೆಡೆ ನಾನೆ ದಲಿತ ಎಂದೂ ಹೇಳುತ್ತಾರೆ. ನಾನೇ ಮುಂದಿನ ಮುಖ್ಯಮಂತ್ರಿ ಅಂತ ಇದರರ್ಥ. ಕಾಂಗ್ರೆಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.