ಕೊಪ್ಪಳ, ನ.18 (DaijiworldNews/PY): "ಶ್ರೀಕಿ ನಾಪತ್ತೆಯಾಗಿರುವ ವಿಚಾರವನ್ನು ಪೊಲೀಸರು ನೋಡಿಕೊಳ್ಳುತ್ತಾರೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೊಪ್ಪಳದ ಏರೋಡ್ರೋಮ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಶ್ರೀಕಿ ಕಣ್ಮರೆಯಾಗಿರುವ ಬಗ್ಗೆ ಪೊಲೀಸರು ನೋಡಿಕೊಳ್ಳುತ್ತಾರೆ" ಎಂದು ಹೊರ ನಡೆದಿದ್ದು, ಸುದ್ದಿಗಾರರು ಎಷ್ಟೇ ಕರೆದರು ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಇದಕ್ಕೂ ಮುನ್ನ ಮಾತನಾಡಿದ ಸಿಎಂ, "ರಾಜ್ಯಾದ್ಯಂತ ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದೆ. ಇದು ಮುಗಿದ ಬಳಿಕ ಹಣಕಾಸು ಇಲಾಖೆಯ ಜೊತೆ ಚರ್ಚಿಸಿ ಪರಿಹಾರ ನೀಡಲಾಗುವುದು" ಎಂದು ತಿಳಿಸಿದ್ದಾರೆ.
"ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ನಡೆಯುತ್ತಿದ್ದು, ಈ ಹಿನ್ನೆಲೆ ಬಿಜೆಪಿ ನಾಲ್ಕು ತಂಡಗಳಲ್ಲಿ ಪ್ರಚಾರಕ್ಕೆ ಸೂಚನೆ ನೀಡಿದೆ. ಹಾಗಾಗಿ ಕೊಪ್ಪಳದಲ್ಲಿ ನಾನು ಚಾಲನೆ ನೀಡುತ್ತಿದ್ದೇನೆ" ಎಂದು ಹೇಳಿದ್ದಾರೆ.
"ವಿಧಾನ ಪರಿಷತ್ ಸ್ಥಾನಗಳ ಚುನಾವಣೆಯಲ್ಲಿ ಯಾರಿಕೆ ಟಿಕೆಟ್ ಕೊಡಬೇಕು ಎಂದು ರಾಜ್ಯದಿಂದ ಪಟ್ಟಿ ಫೈನಲ್ ಮಾಡಿ ಕೇಂದ್ರ ಹೈಕಮಾಂಡ್ಗೆ ಕಳುಹಿಸಲಾಗಿದೆ. ಅಲ್ಲಿಂದ ವಾಪಾಸ್ಸಾದ ಬಳಿಕ ಕೂಡಲೇ ಘೋಷಿಸಲಾಗುವುದು" ಎಂದು ತಿಳಿಸಿದ್ದಾರೆ.