ಕೋಲಾರ, ನ.18 (DaijiworldNews/HR): ಜಿಲ್ಲೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗಮಿಸುವುದಕ್ಕೆ ಪೊಲೀಸರು ನಿಷೇಧ ಹೇರಿದ್ದರು. ಆದರೆ ಪೊಲೀಸರ ನಿಷೇಧದ ನಡುವೆಯೂ ಜಿಲ್ಲೆಗೆ ಆಗಮಿಸಿದ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ್ ನಗರದಲ್ಲಿ ಇಂದು ಹಿಂದೂಪರ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದ್ದು, ಈ ಬಂದ್ ನಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೂಡ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿತ್ತು. ಹೀಗಾಗಿ ಕೋಲಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅವರು ಜಿಲ್ಲೆಗೆ ಪ್ರವೇಶಿಸೋದಕ್ಕೆ ನಿಷೇಧ ಹೇರಲಾಗಿತ್ತು.
ಆದರೆ ನಿರ್ಭಂಧದ ನಡುವೆಯೂ ಬಂದ್ ನಲ್ಲಿ ಭಾಗವಹಿಸೋದಕ್ಕೆ ಆಗಮಿಸಿದ ಪ್ರಮೋದ್ ಮುತಾಲಿಕ್ ಅವರನ್ನು ಕೋಲಾರದ ರಾಮಸಂದ್ರ ಗಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಇನ್ನು ಕೋಲಾರ ಪೊಲೀಸರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೊಲೀಸರ ವಶಕ್ಕೆ ನೀಡಿದ್ದಾರೆ.