ನವದೆಹಲಿ, ನ.18 (DaijiworldNews/PY): ಸಂಸತ್ ಅಧಿವೇಶನದಲ್ಲಿ ಗುಣಮಟ್ಟದ ಚರ್ಚೆಗೆ ಆದ್ಯತೆ ನೀಡಬೇಕು ಎಂದ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ಪಿ ಚಿದಂಬರಂ, "ಪ್ರಧಾನಿ ಎಂದಾದರೂ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸುತ್ತಾರೆಯೇ?" ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಸಂಸತ್ತಿನಲ್ಲಿ ಗುಣಮಟ್ಟದ ಚರ್ಚೆಗಳ ಅಗತ್ಯವನ್ನು ಪ್ರಧಾನಿ ಒತ್ತಿ ಹೇಳಿರುವುದು ಓದಲು ಆಸಕ್ತಿದಾಯಕವಾಗಿದೆ. ಗುಣಮಟ್ಟದ ಚರ್ಚೆಗಳಿಗೆ ಪ್ರತ್ಯೇಕ ಸಮಯವನ್ನು ನಿಗದಿಪಡಿಸುವಂತೆಯೂ ಸಲಹೆ ನೀಡಿದ್ದಾರೆ. ಆದರೆ, ಪ್ರಧಾನಿ ಎಂದಾದರೂ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸುತ್ತಾರೆಯೇ?" ಎಂದು ಕೇಳಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಮೌಲ್ಯಯುತ ಚರ್ಚೆಗೆ ಪ್ರತ್ಯೇಕವಾದ ಸಮಯ ನಿಗದಿಪಡಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದರು.
ಸರ್ಕಾರ, ಸಂಸತ್ತಿನಲ್ಲಿ ಮುಖ್ಯ ವಿಚಾರಗಳ ಚರ್ಚೆಯಿಂದ ಪಲಾಯನ ಮಾಡುತ್ತಿದೆ ಎಂದು ಕಾಂಗ್ರೆಸ್ ದೂರಿದೆ. ಸದನದ ಕಾರ್ಯಕಲಾಪಕ್ಕೆ ವಿರೋಧ ಪಕ್ಷಗಳ ಅಡ್ಡಿಯಾಗುತ್ತಿದೆ ಎಂದಿ ಕೇಂದ್ರ ಸರ್ಕರ ಆರೋಪಿಸಿದೆ.