ಶ್ರೀನಗರ, ನ.18 (DaijiworldNews/HR): ತನ್ನನ್ನು ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೆಹಬೂಬಾ, "ನನ್ನನ್ನು ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದ್ದು, ಪಕ್ಷದ ಮುಖ್ಯ ವಕ್ತಾರ ಸುಹೈಲ್ ಬುಖಾರಿ ಹಾಗೂ ವಕ್ತಾರ ನಜ್ಮು ಸಾಕೀಬ್ರನ್ನು ಪೊಲೀಸರು ಬಂಧಿಸಿದ್ದಾರೆ" ಎಂದು ಹೇಳಿದ್ದಾರೆ.
ಇನ್ನು ಕೇಂದ್ರ ಸರ್ಕಾರವು ಉಗ್ರರ ಹೆಸರಿನಲ್ಲಿ ಅಮಾಯಕ ನಾಗರಿಕರನ್ನು ಕೊಲ್ಲುತ್ತಿದೆ ಎಂದು ಆರೋಪ ಮಾಡಿದ್ದಾರೆ.