ನವದೆಹಲಿ, ನ 19 (DaijiworldNews/MS): ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ 9 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
"ಇಂದು ಶ್ರೀ ಗುರುನಾನಕ್ ದೇವ್ ಜಿಯವರ ಪ್ರಕಾಶ್ ಪುರಬ್. ಇಂದು, ಉತ್ತರ ಪ್ರದೇಶದ ಮಹೋಬಾದಲ್ಲಿ ನೀರಾವರಿಗೆ ಸಂಬಂಧಿಸಿದ ಪ್ರಮುಖ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ" ಎಂದು ಅವರ ಕಚೇರಿ ಟ್ವೀಟ್ನಲ್ಲಿ ತಿಳಿಸಿದೆ.
ನಂತರ ಅವರು ಝಾನ್ಸಿಗೆ 'ರಾಷ್ಟ್ರ ರಕ್ಷಣಾ ಸಂಪರ್ಕ ಪರ್ವ'ಕ್ಕೆ ಹೋಗುತ್ತಾರೆ. ಈ ಎಲ್ಲ ಕಾರ್ಯಕ್ರಮಗಳಿಗೂ ಮುನ್ನ ಅವರು ಬೆಳಗ್ಗೆ 9 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ (ಪಿಎಂಒ) ತಿಳಿಸಿದೆ.